ಮಂಗಳೂರು : ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದ ಇಬ್ಬರನ್ನು 15 ಗ್ರಾಂ ಎಂಡಿಎಂಎ ಸಹಿತ ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆ ಮಂಜೇಶ್ವರ ಬಡಾಜೆ ಪೋಸ್ಟ್ ಪುಚ್ಚಿತ್ಬೈಲ್ ಹೌಸ್ ನಿವಾಸಿಗಳಾದ ಅಬ್ದುಲ್ ಸಲಾಂ ಯಾನೇ ಸಲಾಂ(30) ಮತ್ತು ಸೂರಜ್ ರೈ ಯಾನೇ ಅಂಕಿ(26) ಬಂಧಿತರು.
ಎಂಡಿಎಂಎಯನ್ನು ಮಂಗಳೂರು ನಗರಕ್ಕೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಬರುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ತಲಪಾಡಿ ಕೆ.ಸಿ.ರೋಡ್ ಬಳಿ ಆರೋಪಿಗಳನ್ನು ಬಂಧಿಸಿದ್ದಾರೆ.
75,000 ರೂ. ಮೌಲ್ಯದ 15 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 2 ಮೊಬೈಲ್ ಫೋನ್ಗಳು, ಡಿಜಿಟಲ್ ತೂಕ ಮಾಪಕ ಹಾಗೂ ಡಿಯೋ ದ್ವಿಚಕ್ರ ವಾಹನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.



























