ಬಂಟ್ವಾಳ : ಮುಸ್ಲಿಂ ಸಮುದಾಯದ ಪವಿತ್ರ ಧಾರ್ಮಿಕ ಕ್ಷೇತ್ರ ಮೆಕ್ಕಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಾರಣಕ್ಕಾಗಿ ಯುವಕನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಯುವಕನೋರ್ವ ಮೆಕ್ಕಾದ ಬಗ್ಗೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಾಕಿದ್ದ ಎನ್ನಲಾಗಿದೆ.
ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಸಾಧ್ಯತೆಯಿದ್ದ ಹಿನ್ನಲೆ ಸಂದೇಶವನ್ನು ರವಾನಿಸಿದ ಯುವಕನ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿ ಯುವಕನನ್ನು ಬಂಧಿಸಿದ್ದಾರೆ.
ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.


























