ಕಡಬ : ಮನೆಯೊಂದರ ಹಿಂಬದಿ ಅಕ್ರಮ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ ಕಡಬ ಸಮೀಪ ನಡೆದಿದೆ.

ಕಡಬದ ಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಕಾಯರ್ತಡ್ಕ ಸಮೀಪದ ಕಾರ್ಕಳ ಎಂಬಲ್ಲಿ ಮನೆಯೊಂದರಲ್ಲಿ ಜಾನುವಾರು ವಧೆ ಮಾಡುತ್ತಿರುವ ಕುರಿತು ಬಜರಂಗದಳಕ್ಕೆ ಮಾಹಿತಿ ಲಭಿಸಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ರವಾನಿಸಿದ ಮೇರೆಗೆ ಕಡಬ ಠಾಣಾ ಎಸ್.ಐ. ನೇತೃತ್ವದ ಪೊಲೀಸರು ದಾಳಿ ಮಾಡಿರುವುದಾಗಿ ತಿಳಿದು ಬಂದಿದೆ.
ಗೋವಧೆ ಮಾಡಲು ಬಳಸಿದ ಸಾಧನ, ದನದ ತಲೆ, ಸುಮಾರು 70 ಕೆಜಿಯಷ್ಟು ಮಾಂಸ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಬಿನೊಯ್ ಮತ್ತು ಕುಟ್ಟಪ್ಪನ್ ಎಂಬವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

























