ವಿಟ್ಲ : ಗಣೇಶೋತ್ಸವ ಶೋಭಾಯಾತ್ರೆ ವೇಳೆ ಪಾನೀಯ ಹಾಗೂ ತಿಂಡಿ-ತಿನಸುಗಳನ್ನು ಹಂಚದಂತೆ ಮಂಡಳಿ ವತಿಯಿಂದ ಮಸೀದಿಗೆ ಬರೆದಿರುವ ಪತ್ರವೊಂದು ವೈರಲ್ ಆಗುತ್ತಿದೆ.
ವೈರಲ್ ಆದ ಪತ್ರದಲ್ಲೇನಿದೆ?
‘‘ಕಳೆದ ವರ್ಷದ ಸಾರ್ವಜನಿಕ ಗಣೇಶೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಪಾನೀಯ ಮತ್ತು ಸಿಹಿತಿಂಡಿ ವಿತರಣೆಯನ್ನು ತಮ್ಮ ಸಮಾಜ ಬಾಂಧವರು ನೀಡಿರುತ್ತಾರೆ. ಅದನ್ನು ಸ್ವೀಕರಿಸಿದ ನಮ್ಮ ಕೆಲವು ಮಕ್ಕಳು ಅಸ್ವಸ್ಥರಾಗಿರುತ್ತಾರೆ. ಇದರಿಂದ ನಮ್ಮ ಸಾಮರಸ್ಯ ಕೆಡುತ್ತದೆ. ಇದರ ಮುಂಜಾಗೃತೆಗಾಗಿ ತಮ್ಮಲ್ಲಿ ಮನವಿ ಮಡುವುದೇನೆಂದರೆ, ಇನ್ನು ಮುಂದಕ್ಕೆ ಶೋಭಾಯಾತ್ರೆಯಲ್ಲಿ ತಮ್ಮ ಸಮಾಜ ಬಾಂಧವರು ಯಾವುದೇ ಪಾನೀಯ ಹಾಗೂ ತಿಂಡಿ ತಿನಸುಗಳನ್ನು ನೀಡಬಾರದಾಗಿ ಈ ಮೂಲಕ ವಿನಂತಿಸುತ್ತೇವೆ. ಆದ್ದರಿಂದ ನಮ್ಮ ಶೋಭಾಯಾತ್ರೆಗೆ ನಿಮ್ಮ ಎಲ್ಲಾ ಸಮಾಜ ಬಾಂಧವರು ಮೇಲಿನ ವಿಷಯಕ್ಕೆ ಸಹಕರಿಸುವಂತೆ ನಿಮ್ಮಲ್ಲಿ ಈ ಮೂಲಕ ಮನವಿ ಮಾಡುತ್ತೇವೆ’’ ಎಂದು ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿ ಬರೆದಿದ್ದು ಎನ್ನಲಾದ ವೈರಲ್ ಆಗಿರುವ ಪತ್ರದಲ್ಲಿ ಉಲ್ಲೇಖವಾಗಿದೆ.
ಇದೀಗ ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ.