ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷವಾಗಿದೆ.
ಸೋಮವಾರ ತಡರಾತ್ರಿ ಘಾಟಿ ಭಾಗದ ಅಣ್ಣಪ್ಪ ಬೆಟ್ಟದಿಂದ ಸೋಮನ ಕಾಡು ಅರಣ್ಯಭಾಗದ ತನಕ ರಸ್ತೆಯಲ್ಲಿ ಸವಾರಿ ನಡೆಸಿದ ಕಾಡಾನೆ ಬಳಿಕ ಸೋಮನ ಕಾಡು ಪರಿಸರದ ಅರಣ್ಯ ಪ್ರದೇಶದತ್ತ ತೆರಳಿದೆ ಎಂದು ವಾಹನ ಸವಾರರು ತಿಳಿಸಿದ್ದಾರೆ.
ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿದ ವೇಳೆ ಹಲವು ಹೊತ್ತು ಟ್ರಾಫಿಕ್ ಜಾಮ್ ಸಮಸ್ಯೆ ಕಂಡು ಬಂತು. ಮಂಜಿನ ವಾತಾವರಣ, ನಿರಂತರ ಸುರಿಯುವ ಮಳೆ, ಜೊತೆಗೆ ಕಾಡಾನೆಯ ತಿರುಗಾಟ ಘಾಟಿ ಪ್ರದೇಶದಲ್ಲಿ ವಾಹನ ಸವಾರರಿಗೆ ಸಮಸ್ಯೆಯಾಗಿದೆ.
ಮಂಗಳವಾರ ಬೆಳಿಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.



























