ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಘಟನೆ ನಡೆದಿದೆ.
ಮೃತರನ್ನು ಅರ್ಚನಾ ಕಾಮತ್ (34) ಎಂದು ಗುರುತಿಸಲಾಗಿದೆ.
ಅರ್ಚನಾ ಕಾಮತ್ ಯಕೃತ್ತಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ತಮ್ಮ ಸಂಬಂಧಿಕರೊಬ್ಬರಿಗೆ ಯಕೃತ್ತಿನ ಕಸಿಗೆ ತನ್ನ ಯಕೃತ್ತನ್ನು ದಾನ ಮಾಡಿದ್ದರು. ಈ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ವೇಳೆ ಸೊಂಕಿಗೆ ತುತ್ತಾಗಿದ್ದರು ಎಂದು ಹೇಳಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ಸದಾ ಸಮಾಜಮುಖಿ ಚಿಂತನೆಯೊಂದಿಗೆ ಅರ್ಚನಾ ಕಾಮತ್ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.
ಸಂಬಂಧಿಕರು, ಆತ್ಮೀಯರು ಆಘಾತಕಾರಿ ಸುದ್ದಿ ತಿಳಿದು ಕಂಬನಿ ಮಿಡಿದಿದ್ದಾರೆ.
ಮೃತರು ಪತಿ ಸಿಎ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ.

























