ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಚರಂಡಿಗೆ ಉರುಳಿ ಬಿದ್ದ ಘಟನೆ ತಿಂಗಳಾಡಿ ಬಡಕೋಡಿ ರಸ್ತೆಯ ನೆಕ್ಕಿಲು ಎಂಬಲ್ಲಿ ನಡೆದಿದೆ.
ರೆಂಜಲಾಡಿ ನಿವಾಸಿ ರಫೀಕ್ ಎಂಬವರು ಚಲಾಯಿಸುತ್ತಿದ್ದ ಓಮ್ನಿ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದ್ದು, ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಸ್ಥಳೀಯರ ನೆರವಿನಿಂದ ಕ್ರೇನ್ ಸಹಾಯದಿಂದ ವಾಹನವನ್ನು ಮೇಲಕ್ಕೆತ್ತಲಾಗಿದ್ದು, ಕಾರು ಜಖಂಗೊಂಡಿದೆ.