ಪುತ್ತೂರು : ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ದರ್ಬೆಯಲ್ಲಿ ನಡೆದಿದೆ.
ಇನ್ವರ್ಟರ್ ಶಾರ್ಟ್ ಆದ ಹಿನ್ನಲೆ ದರ್ಬೆ ಸರ್ಕಲ್ ಬಳಿಯಲ್ಲಿರುವ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿದ್ದು, ಕಾರ್ಯಾಚರಣೆ ನಡೆಸಿದ್ದಾರೆ.
ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.