ಮಂಗಳೂರು : ಕೇರಳದಲ್ಲಿ ನಿಫಾ ಬೆನ್ನಲ್ಲೇ ಮಂಗನ ಕಾಯಿಲೆ ಭೀತಿ ಉಂಟಾಗಿದ್ದು, ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲೀ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಆಫ್ರಿಕನ್ ದೇಶಗಳಲ್ಲೂ ಮಂಗನ ಕಾಯಿಲೆ ಹರಡಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು ಬಂದರಿನ ಮೂಲಕ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರನ್ನು ತಪಾಸಣೆ ನಡೆಸಲು ನಿರ್ಧರಿಸಲಾಗಿದೆ.
ಪ್ರತ್ಯೇಕ ಆ್ಯಂಬುಲೆನ್ಸ್ ಸನ್ನದ್ಧವಾಗಿದೆ. ಮಂಗನ ಕಾಯಿಲೆ ಪೀಡಿತ ರೋಗಿಗಳ ಚಿಕಿತ್ಸೆಗೆಂದು ವೆನ್ಲಾಕ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಅನ್ನು ಕಾದಿರಿಸಲಾಗಿದೆ.


























