ಪುತ್ತೂರು: ಕೊರೋನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಫ್ರಂಟ್ ಲೈನ್ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಕಡಬ ಮತ್ತು ಪುತ್ತೂರು ತಾಲೂಕಿನ ಸುಮಾರು ೨೫೦ ಕ್ಕೂ ಮಿಕ್ಕಿ ಆಶಾ ಕಾರ್ಯಕರ್ತರಿಗೆ ಬಿಜೆಪಿ ಯುವ ಮೋರ್ಚದ ಜಿಲ್ಲಾ ಉಪಾಧ್ಯಕ್ಷ ಸಹಜ್ ರೈ ಅವರ ನೇತೃತ್ವದ ವಿಜಯ ಸಾಮ್ರಾಟ್ ಸಂಘಟನೆಯಿಂದ ನಿತ್ಯ ಬಳಕೆಯ ಆಹಾರದ ಕಿಟ್ ಗಳನ್ನು ವಿತರಣೆ ಮಾಡಲಾಯಿತು.
ರಾಜ್ಯ ಬಿಜೆಪಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆಯವರು ಆಶಾ ಕಾರ್ಯಕರ್ತರಿಗೆ ಕಿಟ್ ಗಳನ್ನು ಹಸ್ತಾಂತರಿಸಿದರು. ಶಾಸಕರ ವಾರ್ ರೂಮ್ ನ ಪ್ರಮುಖ್ ಸಾಜ ರಾಧಾಕೃಷ್ಣ ಆಳ್ವ, ಚಂದ್ರಶೇಖರ್ ರಾವ್ ಬಪ್ಪಳಿಗೆ, ಬಿಜೆಪಿ ಗ್ರಾಮಾಂತರ ಮಂಡಲದ ಯುವ ಮೋರ್ಚಾದ ಅಧ್ಯಕ್ಷ ನವೀನ್ ಪಡ್ನೂರು, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ಅಜಿತ್ ಕುಮಾರ್ ರೈ, ಮಾದವ ಮಾವೆ, ಅರುಣ್ ಕುಮಾರ್ ವಿಟ್ಲ, ದಯಾನಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹಜ್ ರೈ ಅತಿಥಿಗಳನ್ನು ಗೌರವಿಸಿದರು.ಉಮೇಶ್ ನಾಯಕ್ ಸ್ವಾಗತಿಸಿದರು.