ಲಕ್ನೋ : ಕೆಲಸದ ಒತ್ತಡದಿಂದ ಕುರ್ಚಿ ಮೇಲೆ ಕುಳಿತೇ ಬ್ಯಾಂಕ್‌ನ ಮಹಿಳಾ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಲಕ್ನೋದಲ್ಲಿ ನಡೆದಿದೆ.
ಸಹೋದ್ಯೋಗಿಯೊಬ್ಬರು ಆಕೆ ಕೆಲಸದ ಒತ್ತಡದಿಂದಲೇ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.
ಮಹಿಳೆಯನ್ನು ಸದಾಫ್ ಫಾತಿಮಾ ಎಂದು ಗುರುತಿಸಲಾಗಿದ್ದು, ಅವರು ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು.
ಗೋಮ್ಟಿನಗರದಲ್ಲಿರುವ ಬ್ಯಾಂಕ್‌ನ ವಿಬೂತಿ ಖಂಡ್ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸೆಪ್ಟೆಂಬರ್ 24 ರಂದು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾಗ ಕುರ್ಚಿಯಿಂದ ಕೆಳಗೆ ಬಿದ್ದಿದ್ದರು, ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಾತನಾಡಿ, ದೇಶದಲ್ಲಿ ಪ್ರಸ್ತುತ ಆರ್ಥಿಕ ಒತ್ತಡದ ಸಂಕೇತವಾಗಿದೆ ಎಂದು ಹೇಳಿದ್ದಾರೆ. ಎಲ್ಲಾ ಕಂಪನಿಗಳು ಮತ್ತು ಸರ್ಕಾರಿ ಇಲಾಖೆಗಳು ಈ ನಿಟ್ಟಿನಲ್ಲಿ ಗಂಭೀರವಾಗಿ ಯೋಚಿಸಬೇಕು. ಇದರಿಂದ ದೇಶದ ಮಾನವ ಸಂಪನ್ಮೂಲಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.


























