ಪುತ್ತೂರು : ಎಸ್ಬಿಐ ಬ್ಯಾಂಕ್ನಿಂದ ಸಾಲ ಪಡೆದು ಮರುಪಾವತಿಸದೆ, ವಸೂಲಿಗೆ ಬಂದ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಪ್ರಕರಣ ಪುತ್ತೂರಿನಲ್ಲಿ ನಡೆದಿದೆ.
ಪ್ರತಿಷ್ಟಿತ ಶೋರೂಮ್ ಮಾಲಕರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸರು ಆರ್ಮ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಎಸ್ಬಿಐ ಬ್ಯಾಂಕ್ನಿಂದ ಸಾಲ ಪಡೆದುಕೊಂಡಿದ್ದು, ಅದು ಎನ್ಪಿಎ ಆಗಿ ನೋಟೀಸು ಕೂಡಾ ಜಾರಿ ಮಾಡಲಾಗಿತ್ತು. ಆದ್ರೆ ಸಾಲಪಡೆದವರು ಯಾವುದಕ್ಕೂ ಉತ್ತರಿಸದ ಹಿನ್ನಲೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಸೂಚನೆಯಂತೆ ಸಿಬ್ಬಂದಿ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಪಿಸ್ತೂಲ್ ತೋರಿಸಿ ಶೂಟ್ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಸಿಬ್ಬಂದಿ ದೂರು ನೀಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಶೋ ರೂಮ್ ನ ಮಾಲಕರ ಮಗನ ಪತ್ನಿ ಕೂಡ ದೂರು ನೀಡಿದ್ದು, ಮನೆಯಲ್ಲಿರುವಾಗ ಏಕಾಏಕಿ ಮನೆಯೊಳಗೆ ಪ್ರವೇಶ ಮಾಡಿ ಪರಿಚಯ ಕೂಡ ಮಾಡಿಕೊಳ್ಳದೆ. ಅಸಭ್ಯವಾಗಿ ವರ್ತಿಸಿ ಅವಾಚ್ಯ ಶಬ್ದಗಳಿಂದ ಬೈದು, ಮನೆಯನ್ನು ಜಪ್ತಿ ಮಾಡುವುದಾಗಿ ಬೆದರಿಸಿದ್ದಾರೆ ಎಂದು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಎರಡೂ ಪ್ರಕರಣಗಳು ದಾಖಲಾಗಿದ್ದು, ತನಿಖೆ ನಡೆಸುತ್ತಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಪಿ. ತಿಳಿಸಿದ್ದಾರೆ.