ಮಂಗಳೂರು : ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಅಭ್ಯರ್ಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಬೊಟ್ಯಾಡಿರನ್ನು ಆಯ್ಕೆ ಮಾಡಿದ್ದು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಕಿಶೋರ್ ಕುಮಾರ್ ರನ್ನು ಭೇಟಿಯಾಗಿ ಅಭಿನಂದಿಸಿದರು.

ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಯಾಗಿರುವ ಕಿಶೋರ್ ಕುಮಾರ್ ಅವರ ಗೆಲುವಿಗೆ ಪೂರ್ಣ ರೀತಿಯಲ್ಲಿ ಕಂಕಣಬದ್ಧರಾಗಿದ್ದೇವೆ. ಅತೀ ಹೆಚ್ಚಿನ ಮತಗಳಿಂದ ಗೆಲ್ಲುವಂತೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿ ಹಾಗೂ ಪಕ್ಷದ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.


























