ಮಂಗಳೂರು : ವಿಧಾನ ಪರಿಷತ್ಗೆ ದ.ಕ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲು ಕೊನೆಯ ದಿನವಾದ ಗುರುವಾರ ಬಿಜೆಪಿ, ಕಾಂಗ್ರೆಸ್ ಹಾಗೂ ಎಸ್ಡಿಪಿಐ ಅಭ್ಯರ್ಥಿಗಳ ಸಹಿತ ನಾಲ್ವರು ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, ಎಸ್ಡಿಪಿಐ ಅಭ್ಯರ್ಥಿಯಾಗಿ ಅನ್ವರ್ ಸಾದತ್, ಪಕ್ಷೇತರ ಅಭ್ಯರ್ಥಿಯಾಗಿ ಮೊಹಮ್ಮದ್ ರಿಯಾಝ್ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈಗಾಗಲೇ ಪಕ್ಷೇತರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ ನಾಮಪತ್ರ ಸಲ್ಲಿಸಿದ್ದು, ಒಟ್ಟು ಐವರು ನಾಮಪತ್ರ ಸಲ್ಲಿಸಿದಂತಾಗಿದೆ.
ಕಿಶೋರ್ ಕುಮಾರ್ ಪುತ್ತೂರು ಹಾಗೂ ರಾಜು ಪುಜಾರಿ ತಲಾ 2 ಸೆಟ್ ನಾಮಪತ್ರ ಸಲ್ಲಿಸಿದರು.