ಉಪ್ಪಿನಂಗಡಿ : ವಿದ್ಯುತ್ ಆಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಯಿಲ ಗ್ರಾಮದ ವಳಕಡಮದ ಕೆರಂತೇಳು ಎಂಬಲ್ಲಿ ನಡೆದಿದೆ.
ಬಾಬು (52) ಮೃತರು.
ಮನೆಯಲ್ಲಿ ವಿದ್ಯುತ್ ಸ್ವಿಚ್ ಬೋರ್ಡ್‌ಗೆ ಕೈ ಹಾಕಿದಾಗ ಅದರಲ್ಲಿ ವಿದ್ಯುತ್ ಪ್ರವಹಿಸಿ ಅವರು ವಿದ್ಯುತ್ ಆಘಾತಕ್ಕೊಳಗಾದರು.
ತಕ್ಷಣವೇ ಅವರನ್ನು ಉಪ್ಪಿನಂಗಡಿಯ ಸಮುದಾಯ ಆಸ್ಪತ್ರೆಗೆ ಕರೆ ತಂದಿದ್ದು, ಬಳಿಕ ಆ್ಯಂಬುಲೆನ್ಸ್‌ನಲ್ಲಿ ಪುತ್ತೂರು ಆಸ್ಪತ್ರೆಗೆ ಸಾಗಿಸಿದ್ದು, ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ.
ಮೃತರು ಇಬ್ಬರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ.

























