ಪುತ್ತೂರು : ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದ ಕಾಲೇಜು ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಹರುನಗರದ ಗಣೇಶ್ ಬಾಗ್‌ನ ಲಕ್ಷ್ಮೀಪ್ರಸಾದ್ ಕಂಪೌಂಡ್ ದಿ.ಕೇಶವ ಮೂರ್ತಿ ಎಂಬವರ ಪುತ್ರ ಮನೋಜ್ ಕೆ (20) ನಾಪತ್ತೆಯಾದ ಯುವಕ.
ಫಿಲೋಮಿನಾ ಕಾಲೇಜಿನಲ್ಲಿ 2ನೇ ವರ್ಷದ ಬಿಎಸ್ಸಿ ವಿದ್ಯಾರ್ಥಿಯಾಗಿರುವ ಮನೋಜ್ ಅ.5ರಂದು ಬೆಳಿಗ್ಗೆ ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿದ್ದು, ಬಳಿಕ ಮನೆಗೆ ತಿರುಗಿ ಬಂದಿಲ್ಲ.
ಸಂಬಂಧಿಕರಲ್ಲಿ, ಆಸುಪಾಸಿನಲ್ಲಿ ಮತ್ತು ಸ್ನೇಹಿತರಲ್ಲಿ ವಿಚಾರಿಸಿದರೂ ಪತ್ತೆಯಾಗಿಲ್ಲ. ಮನೋಜ್ ಬಳಸುತ್ತಿದ್ದ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮನೋಜ್ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಲ್ಲಿ ಪುತ್ತೂರು ನಗರ ಠಾಣೆಗೆ ತಿಳಿಸುವಂತೆ ವಿನಂತಿಸಿದ್ದಾರೆ.