ಪುತ್ತೂರು : ವಿದ್ಯುತ್ ಲೈನ್ ಕಾಮಗಾರಿ ನಿರ್ವಹಿಸುವ ಹಿರಿಯ ವಿದ್ಯುತ್ ಗುತ್ತಿಗೆದಾರರೊಬ್ಬರಿಗೆ ಅಪರಿಚಿತ ವ್ಯಕ್ತಿಯೊರ್ವ ಮೊಬೈಲ್ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯುತ್ ಪರವಾನಿಗೆ ಚಾಲ್ತಿ ಇಲ್ಲದ ವ್ಯಕ್ತಿಯೊಬ್ಬರು ಮೆಸ್ಕಾಂ ಗುತ್ತಿಗೆ ಕೆಲಸ ನಿರ್ವಹಿಸುತ್ತಿರುವುದನ್ನು ಮತ್ತು ಹಗರಣ ಬಯಲು ಮಾಡಿದರೆ ನಿನ್ನನ್ನು ಬಿಡುವುದಿಲ್ಲ ಎಂದು ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆದರಿಕೆಯೊಡ್ಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ.