ಬಂಟ್ವಾಳ : ಪೂರ್ವದ್ಚೇಷದ ಹಿನ್ನೆಲೆಯಲ್ಲಿ ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.
ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರು ಆರೋಪಿಗಳಾಗಿದ್ದಾರೆ.
ಅಮ್ಮೆಮಾರ್ ನಿವಾಸಿ ತಸ್ಲೀಮ್, ಮಹಮ್ಮದ್ ಶಾಕೀರ್, ನಾಸೀರ್, ಸಿಯಾಬು, ಸೈಫುದ್ದೀನ್ ಅವರು ಮಾತನಾಡುತ್ತಿದ್ದ ವೇಳೆ ತಸ್ಲೀಮ್ ಗೆ ಕರೆಯೊಂದು ಬಂದಿದ್ದು, ಈ ವೇಳೆ ಆರೋಪಿಯು ಅವಾಚ್ಯ ಶಬ್ದಗಳಿಂದ ಬೈದು ನಾಲ್ಕು ಮಾರ್ಗಕ್ಕೆ ಬರುವಂತೆ ಸವಾಲು ಹಾಕಿದ್ದಾನೆ ಎನ್ನಲಾಗಿದೆ.
ಈ ವೇಳೆ ಅಮ್ಮೆಮಾರ್ ಶಾಲಾ ಬಳಿಗೆ ಹೋದಾಗ ಮನ್ಸೂರ್ ಹಾಗೂ ಇತರರಿದ್ದು, ಈ ವೇಳೆ ತಸ್ಲೀಮ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ತಸ್ಲೀಮ್ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



























