ಸುರತ್ಕಲ್ : ನನ್ನ ಜೊತೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ ಎಂದು ಸುರತ್ಕಲ್ ಇಡ್ಯಾ ನಿವಾಸಿಯೋರ್ವ ಸಮೀಪದಲ್ಲೇ ವಾಸಿಸುವ ಯುವತಿಯೊಬ್ಬಳಿಗೆ ವಾಟ್ಸಪ್ ಮೆಸೇಜ್ ಮಾಡಿದ್ದಾನೆ ಎನ್ನಲಾಗುತ್ತಿದೆ.
ಸುರತ್ಕಲ್ ಇಡ್ಯಾ ನಿವಾಸಿ, ಸದಾಶಿವನಗರದ ಶಾರಿಕ್ ನೂರ್ಜಹಾನ್ ಮೆಸೇಜ್ ಮಾಡಿದಾತ.
ಯುವತಿಯ ಸಹೋದರನಿಗೆ ವಾಟ್ಸಪ್ ಮೆಸೇಜ್ ಮಾಡಿ ಈ ಧಮ್ಕಿ ಹಾಕಿದ್ದಾನೆ ಎನ್ನಲಾಗಿದೆ. ಯುವತಿಯ ಕುಟುಂಬ ಆತಂಕಗೊಂಡು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಿರುಕುಳ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.



























