ಮಂಗಳೂರು : ನೀಲೇಶ್ವರದ ದೈವಸ್ಥಾನದಲ್ಲಿ ಕಳಿಯಾಟ ಮಹೋತ್ಸವ ವೇಳೆ ಅ.28ರಂದು ರಾತ್ರಿ ಸಂಭವಿಸಿದ ಸುಡುಮದ್ದು ದುರಂತದಲ್ಲಿ ಗಾಯಗೊಂಡವರ ಪೈಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದ್ದಾರೆ.
ಎ.ಜೆ ಆಸ್ಪತ್ರೆಯಲ್ಲಿ ಒಟ್ಟು 26 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.
ಮೂವರು ಸಾಮಾನ್ಯ ಗಾಯಗಳೊಂದಿಗೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಹಾಗೂ ಓರ್ವರು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.