ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪಜೀರು ಗ್ರಾಮದ ಕಂಬಳಪದವು ಸಮೀಪ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಆ್ಯಂಟಿ ಡ್ರಗ್ ಟೀಮ್ ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ಬಂಧಿತರನ್ನು ತಲಪಾಡಿಯ ಮರಿಯ ಚರ್ಚ್ ಕಂಪೌಂಡ್ ನಿವಾಸಿ ಗೌತಮ್(22), ಕುಂಪಲ ಹನುಮಾನ್ ದೇವಸ್ಥಾನ ಬಳಿಯ ನಿವಾಸಿ ಕಾರ್ತಿಕ್(27), ತೊಕ್ಕೊಟ್ಟು ಗಣೇಶ ನಗರದ ಗಣೇಶ ಮಂದಿರದ ಬಳಿ ನಿವಾಸಿ ನಿಖಿಲ್(28) ಎಂದು ಗುರುತಿಸಲಾಗಿದೆ.
ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರಿನ ಕೈಗಾರಿಕಾ ನಿರ್ಜನ ಪ್ರದೇಶದಲ್ಲಿ ಸೋಮವಾರ ಆರೋಪಿಗಳು ಕಾರಿನಲ್ಲಿ ಎಂಡಿಎಂಎ ಪದಾರ್ಥ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳಿಂದ ಒಟ್ಟು 7,76,980
ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.