ಪುತ್ತೂರು: ಇಲ್ಲಿನ ರೋಟರಿಪುರ ಸಾಮೆತ್ತಡ್ಕ ನಡುವೆ ಇರುವ ತೋಡಿನಲ್ಲಿ ಅಪರಿಚಿತ ಶವ ಪತ್ತೆಯಾದ ಘಟನೆ ನಡೆದಿದೆ.
ತೋಡಿನ ಸಮೀಪ ಸ್ಥಳೀಯ ವ್ಯಕ್ತಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯ ಮೃತದೇಹ ಕಾಣಿಸಿದ್ದು ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.