ಮಂಗಳೂರು : ವಿಪರೀತ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾದ ಕಾರಣ ಮರವೂರು ಸೇತುವೆ ಕುಸಿತಕ್ಕೊಳಗಾಗಿದ್ದು, ಸಂಸದರಾದ ನಳಿನ್ ಕುಮಾರ್ ಕಟೀಲ್ ರವರ ಜೊತೆ ಶಾಸಕರುಗಳಾದ ಡಾ.ವೈ ಭರತ್ ಶೆಟ್ಟಿ ಹಾಗೂ ಉಮಾನಾಥ್ ಕೋಟ್ಯಾನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಸ್ಥಳೀಯ ಕಾರ್ಪೊರೇಟರ್ ಲೋಹಿತ್ ಅಮೀನ್, ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಜೊತೆಗಿದ್ದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಬದಲಿ ರಸ್ತೆ ಕಾವೂರು, ಕುಳೂರು, ಕೆಬಿಎಸ್ ಜೋಕಟ್ಟೆ, ಪೋರ್ಕೋಡಿ, ಬಜಪೆ ಅಥವಾ ಪಚ್ಚನಾಡಿ, ವಾಮಂಜೂರು, ಗುರುಪುರ, ಕೈಕಂಬ, ಬಜಪೆ ಮಾರ್ಗವಾಗಿ ತೆರಳಬಹುದಾಗಿದೆ.