ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎನ್ನಲಾದ ಕೇಸ್ನಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಆಧಾರದ ಮೇರೆಗೆ ಎಫ್ಐಆರ್ ದಾಖಲಿಸಿದ್ದು, ಬೆಳಗಾವಿ ಪೊಲೀಸ್ರು ಸಿ.ಟಿ ರವಿ ಅವರನ್ನು ಪ್ರಿವೆಂಟಿವ್ ಅರೆಸ್ಟ್ ಮಾಡಿದ್ದಾರೆ.
ಎಂಎಲ್‌ಸಿ ಸಿ.ಟಿ ರವಿ ವಿರುದ್ಧ ಬಿಎನ್ಎಸ್ ಆ್ಯಕ್ಟ್ ಸೆಕ್ಷನ್ 75 ಮತ್ತು ಸೆಕ್ಷನ್ 79 ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಸೆಕ್ಷನ್ 75 ಲೈಂಗಿಕ ದೌರ್ಜನ್ಯ ಮತ್ತು ಮಹಿಳೆಗೆ ನಿಂದನೆ ಹಾಗೂ ಸೆಕ್ಷನ್ 79 ಕೈ ಸನ್ನೆ ಮತ್ತು ಅಶ್ಲೀಲ ಪದ ಪ್ರಯೋಗ ಆಗಿದ್ದು, ಜಾಮೀನು ರಹಿತ ಕೇಸ್ ಇದಾಗಿದೆ. ಹಿರೇಬಾಗೇವಾಡಿ ಠಾಣೆ ಪೊಲೀಸ್ರು ಎಫ್ಐಆರ್ ಮಾಡಿದ್ದಾರೆ. ಹೀಗಾಗಿ ಸಿ.ಟಿ ರವಿ ಬಂಧನವಾಗಿದೆ.
ವಿಧಾನ ಪರಿಷತ್ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ವೇ* ಎಂಬ ಪದ ಬಳಕೆ ಮಾಡಿದ್ದಾರೆಂಬ ಆರೋಪದ ಬೆನ್ನಲ್ಲೇ ಭಾರೀ ಗದ್ದಲ ಎದ್ದಿದೆ. ಸುವರ್ಣ ಸೌಧದೊಳಗೆ ನುಗ್ಗಿದ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದರು. ಸುವರ್ಣ ಸೌಧದಲ್ಲಿ ಭಾರೀ ಭದ್ರತಾ ಲೋಪ ಕಂಡು ಬಂದಿದೆ.