ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ವತಿಯಿಂದ ಕೊರೊನಾ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ 5 ಲಕ್ಷ ರೂಪಾಯಿಯನ್ನು ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ರವರ ಮೂಲಕ ದೇವಾಲಯದ ಮೊಕ್ತೇಸರರಾದ ವಾಸುದೇವ ಅಸ್ರಣ್ಣ ರವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಅರ್ಚಕರ ಹರಿನಾರಾಯಣ ಅಸ್ರಣ್ಣ, ಕೊಡೆತ್ತೂರು ಗುತ್ತು ಬಿಪಿನ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.