ರಾಜ್ಯ ಮಟ್ಟದಲ್ಲಿ ಎಲ್ಲಾ ಜಿಲ್ಲಾ, ವಿಧಾನಸಭಾ ಹಾಗೂ ಬ್ಲಾಕ್ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಘೋಷಣೆಯಾಗಿದ್ದು ಬಂಟ್ವಾಳ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿನಯ್ ಕುಮಾರ್ ಸಿಂಧ್ಯಾ ರವರು ಪ್ರಚಂಡ ಬಹುಮತದಿಂದ ಚುನಾಯಿತರಾಗಿದ್ದಾರೆ.
ಮಾಜಿ ಸಚಿವರಾದ ಶ್ರೀ ಬಿ ರಮಾನಾಥ ರೈ ಅವರ ಮಾರ್ಗದರ್ಶನದಲ್ಲಿ ವಿಧ್ಯಾರ್ಥಿ ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿದ್ದು ಎನ್.ಎಸ್.ಯು.ಐ ಬಂಟ್ವಾಳ ಇದರ ಅಧ್ಯಕ್ಷರಾಗಿ ಜಿಲ್ಲಾ ಉಪಾಧ್ಯಕ್ಷರಾಗಿ ಹಾಗೂ ರಾಜ್ಯ ಸಂಯೋಜಕರಾಗಿ ಆಯ್ಕೆಯಾಗಿದ್ದು ನಂತರ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿ ಸಕ್ರಿಯ ಕಾರ್ಯನಿರ್ವಹಿಸಿರುತ್ತಾರೆ.