ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.
ನೇತ್ರಕೆರೆ ಕಡಂಬು ನಿವಾಸಿ ವಿಶಾಲ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.
ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರು ತಂದೆ,ತಾಯಿ ಹಾಗು ಸಹೋದರಿಯನ್ನು ಆಗಲಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.



























