ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಇಬ್ಬರು ಎಸ್ ಡಿಪಿಐ ಮುಖಂಡರು ಸೋಮವಾರ ಶಾಸಕ ಅಶೋಕ್ ರೈ ಅವರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಎಸ್ಡಿಪಿಐ ಕೊಟ್ಯಾಡಿ ಉಪಾಧ್ಯಕ್ಷರಾದ ಇಮ್ತಿಯಾಝ್ ಮತ್ತು ಕಾರ್ಯಕರ್ತ ಹಬೀಬ್ ಕೊಟ್ಯಾಡಿಯವರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಶಾಸಕ ಅಶೋಕ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಸನ್ನ ಶೆಟ್ಟಿ ಸಿಝ್ಲರ್, ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಕಿಲ್ ಕಲ್ಲಾರೆ, ಯುವ ಕಾಂಗ್ರೆಸ್ ಪುತ್ತೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಫಾರೂಕ್ ಪೆರ್ನೆ ,ರಾಕೇಶ್ ರೈ ಕುದ್ಕಾಡಿ ಮೊದಲಾದವರು ಉಪಸ್ಥಿತರಿದ್ದರು. ಯುವ ಕಾಂಗ್ರೆಸ್ ಮುಖಂಡ ಶಮೀಮ್ ಗಾಳಿಮುಖ ನೇತೃತ್ವದಲ್ಲಿ ಇಬ್ಬರು ಮುಖಂಡರು ಪಕ್ಷಕ್ಕೆ ಸೇರ್ಪಡೆಯಾದರು.