ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಅಪರೂಪದ ಕಲಾವಿದ, ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ಅವರು ನಿಧನರಾಗಿದ್ದಾರೆ.
ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ನಟ ಬ್ಯಾಂಕ್ ಜನಾರ್ಧನ್ ಅವರ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.