ಹೈದರಾಬಾದ್: ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ವ್ಯಕ್ತಿಯೊಬ್ಬ ಜೀವವನ್ನೇ ಬೆಲೆಯಾಗಿ ತೆತ್ತಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಎಂದಿನಿಂದ ಟ್ರಾಫಿಕ್ ಪೊಲೀಸರು ಅವರ ಕೆಲಸ ಮಾಡುತ್ತಿದ್ದರು. ವಾಹನಗಳ ತಪಾಸಣೆ ನಡೆಸುತ್ತಿದ್ದರು. ಸಿಗ್ನಲ್ ಬಳಿ ಹೋಗುತ್ತಿದ್ದ ಬೈಕ್ ಸವಾರನನ್ನು ತಡೆದಿದ್ದಾರೆ ಆತ ತಪ್ಪಿಸಿಕೊಳ್ಳಲು ಹೋಗಿ ಹಿಂದೆ ಬರುತ್ತಿದ್ದ ಬಸ್ಸಿನಡಿಗಾಗಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಬಾಲನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 35 ವರ್ಷದ ವ್ಯಕ್ತಿಯನ್ನು ಸಂಚಾರ ಪೊಲೀಸ ತಪಾಸಣೆಗಾಗಿ ತಡೆದರು. ಬೈಕ್ ಸವಾರ ಪರಾರಿಯಾಗಲು ಯತ್ನಿಸಿದ್ದ ಆಗ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾನೆ, ಹಿಂದಿನಿಂದ ಬಸ್ ಆತನ ಮೇಲೆ ಹರಿದಿದೆ. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯ ನಂತರ, ಸ್ಥಳೀಯ ನಿವಾಸಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಮತ್ತು ಅಪಘಾತಕ್ಕೆ ಸಂಚಾರಿ ಕಾನ್‌ಸ್ಟೆಬಲ್ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪ ಹೊರಿಸಿದರು. ಕಾನ್‌ಸ್ಟೆಬಲ್ ಕುಡಿದಿದ್ದರು ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಬೈಕ್ ಸವಾರನೇ ಸ್ಕಿಡ್ ಆಗಿರುವುದು ಬೆಳಕಿಗೆ ಬಂದಿದೆ ಎಂದು ಹೇಳಿದರು.
ಮೃತನ ಸಹೋದರ ನೀಡಿದ ದೂರಿನ ಮೇರೆಗೆ ಬಾಲನಗರ ಪೊಲೀಸ್ ಠಾಣೆಯಲ್ಲಿ ಸಂಚಾರ ಕಾನ್‌ಸ್ಟೆಬಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರು ಮಧ್ಯಪ್ರವೇಶಿಸಿ ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ಈ ಪ್ರಕ್ರಿಯೆಯಲ್ಲಿ ಹಲವಾರು ಜನರು ಗಾಯಗೊಂಡರು. ಪೊಲೀಸರ ನಿರ್ಲಕ್ಷ್ಯವನ್ನು ಆರೋಪಿಸಿ ನ್ಯಾಯಕ್ಕಾಗಿ ಒತ್ತಾಯಿಸುತ್ತಾ ಬೋಸುಬಾಬು ಅವರ ಕುಟುಂಬವೂ ಪ್ರತಿಭಟನೆಯಲ್ಲಿ ಸೇರಿಕೊಂಡಿತು.
ಡಿಸಿಪಿ ಮತ್ತು ಎಸಿಪಿ ಕೂಡ ಭಾಗಿಯಾಗಿದ್ದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತ್ತು, ಈ ಪ್ರದೇಶದಲ್ಲಿ ಹಲವು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.