ಪುತ್ತೂರು: ವೈದ್ಯಾಧಿಕಾರಿ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲು ಹಿಂದೂ ಸಂಘಟನೆಗಳ ಕಾರ್ಯಕರ್ತರು
ಠಾಣೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಆರೋಪಿಗಳನ್ನು ಠಾಣೆಗೆ ಕರೆತಂದು ಬಳಿಕ ಬಿಟ್ಟಿದ್ದಾರೆ ಎಂದು ಆರೋಪಿಸಿದ್ದು ಅವರನ್ನು ಕೂಡಲೇ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಠಾಣೆಯ ಮುಂದೆ ಕಾರ್ಯಕರ್ತರು ಜಮಾವಣೆಗೊಂಡಿದ್ದು ಪೊಲೀಸರ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ ಮತ್ತು ಆರೋಪಿಯನ್ನು ಬಂಧಿಸಲು ಆಗ್ರಹ ನಡೆಸುತ್ತಿದ್ದಾರೆ.