ಚಿತ್ರದುರ್ಗ: ಪಕ್ಕದ ಮನೆ ಗೆಳತಿ ಸೈಕಲ್ ಕೊಟ್ಟಿಲ್ಲ ಎಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗೋಪಾಲ ಮತ್ತು ರುದ್ರಮ್ಮ ದಂಪತಿ ಪುತ್ರಿ ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ಸ್ಪಂದನಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಕ್ಕದ ಮನೆಯ ಸ್ನೇಹಿತೆ ಜತೆ ಬಾಲಕಿ ನಿತ್ಯ ಸೈಕಲ್ ಆಡುತ್ತಿದ್ದಳು.
ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.