ಪುತ್ತೂರು: ವೈದ್ಯಾಧಿಕಾರಿ ಮೇಲೆ ಹಲ್ಲೆ ಖಂಡಿಸಿ ಆರೋಪಿಯನ್ನು ಬಂಧಿಸುವಂತೆ ನಡೆದ ಪ್ರತಿಭಟನೆಯಲ್ಲಿ ರಸ್ತೆ ತಡೆ ನಡೆಸಿದ ಹಿನ್ನಲೆ ಪ್ರಕರಣ ದಾಖಲಾಗಿದೆ.
ಇಲಾಖಾ ಅಧಿಕಾರಿಗಳು ರಸ್ತೆ ತಡೆಯಬೇಡಿ ಎಂದು ಸೂಚಿಸಿದರೂ ಆರೋಪಿಗಳನ್ನು ದಸ್ತಗಿರಿ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರೂ ಸಹ ಪೊಲೀಸರ ಮಾತನ್ನು ಕೇಳದೆ ಪ್ರತಿಭಟನಾಕಾರರು 1 ಗಂಟೆಗಳ ಕಾಲ ರಸ್ತೆಯನ್ನು ತಡೆದು ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟು ಮಾಡಿದ್ದಲ್ಲದೆ ಸಮವಸ್ತ್ರದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರನ್ನು ತಳ್ಳಿಕೊಂಡು ಸಮವಸ್ತ್ರಕ್ಕೆ ಕೈ ಹಾಕಿ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ್ದಾರೆ ಎಂದು ಕೇಸು ದಾಖಲಾಗಿದೆ.
ಪ್ರತಿಭಟನಾಕಾರರ ವಿರುದ್ಧ ಕಲಂ:189(2),126(2),270 |,132,285, ಜೊತೆಗೆ 190 BNS 2023 | ಅಡಿಯಲ್ಲಿ ಪ್ರಕರಣ ದಾಖಲಾಗಿದೆ.