ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆ ಆಸ್ಪತ್ರೆ ಬಳಿ ಜನ ಜಮಾಯಿಸಿದ್ದು ಹೆಚ್ಚುವರಿ ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ.
ಮಂಗಳೂರು ನಗರದ ಹಲವೆಡೆ ನಾಕಾಬಂದಿ ಹಾಕಲಾಗಿದ್ದು ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.
ಆಸ್ಪತ್ರೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಬೇಟಿ ನೀಡಿದ್ದಾರೆ.



























