ಮಂಗಳೂರು: ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ನ ಫಾಜಿಲ್ ಎಂಬಾತನ ಹತ್ಯೆ ಮಾಡಲಾಗಿತ್ತು. ಇದೇ ಸೇಡಿಗೆ ಈಗ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ ಎನ್ನಲಾಗುತ್ತಿದೆ.
ಸುಹಾಸ್ ಹತ್ಯೆ ಬೆನ್ನಲ್ಲೇ ‘ಫಿನೀಶ್’ ಅಂತ ಸೋಶಿಯಲ್ ಮೀಡಿಯಾದಲ್ಲಿ ಅದೊಂದು ಪೋಸ್ಟ್ ವೈರಲ್ ಆಗಿದ್ದು, ಸದ್ಯ ಸಾಕಷ್ಟು ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿದೆ.
ಮಾರ್ಚ್ 31ರಂದೇ ಸುಹಾಸ್ ಶೆಟ್ಟಿ ಹತ್ಯೆಗೆ ಮುಹೂರ್ತ ಫಿಕ್ಸ್ ಆಗಿತ್ತಾ ಎಂಬ ಅನುಮಾನಗಳು ಸದ್ಯ ಹುಟ್ಟಿಕೊಂಡಿವೆ. ಏಕೆಂದರೆ ಅಂದೇ ಟಾರ್ಗೆಟ್ ಕಿಲ್ಲರ್-03 ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಸುಹಾಸ್ ಶೆಟ್ಟಿ ಫೋಟೋ ಹಾಕಿ ಶೀಘ್ರದಲ್ಲೇ ಸೇಡು ತೀರಿಸಿಕೊಳ್ಳುವುದಾಗಿ ಪ್ರಚೋದನಕಾರಿ ಪೋಸ್ಟ್ ಹಾಕಲಾಗಿತ್ತು.
ಇತ್ತ ಸುಹಾಸ್ ಹತ್ಯೆಯಾದ ಕೆಲವೇ ನಿಮಿಷಗಳಲ್ಲಿ Troll_mayadiaka ಹೆಸರಿನ ಇನ್‌ಸ್ಟಾಗ್ರಾಂ ಪೇಜ್ನಲ್ಲಿ ‘ಫಿನೀಶ್’ ಅಂತ ಪೋಸ್ಟ್ ಬಹಿರಂಗವಾಗಿತ್ತು. ಮಂಗಳೂರಿನಿಂದಲೇ ಹಲವು ನಕಲಿ ಇನ್‌ಸ್ಟಾಗ್ರಾಂ ಪೇಜ್ಗಳನ್ನು ನಿಯಂತ್ರಣ ಮಾಡಲಾಗುತ್ತಿದೆ. ಹತ್ಯೆ ಬೆನ್ನಲ್ಲೇ ವಿಡಿಯೋ ಹಂಚಿಕೊಳ್ಳುವ ಮೂಲಕ ಸಂಭ್ರಮಿಸಲಾಗಿದೆ. ಜೊತೆಗೆ ‘Waiting for next wicket’ ಅಂತ ಪೋಸ್ಟ್ ಮಾಡಲಾಗಿದೆ.