ವಿಟ್ಲ : ಕೇಪು ಗ್ರಾಮ ಪಂಚಾಯತ್ ವತಿಯಿಂದ ಕೋವಿಡ್ 19 ಟಾಸ್ಕ್ ಪೋರ್ಸ್ ಸಮಿತಿ ಸಭೆಯು ಕೇಪು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂ.18 ರಂದು ನಡೆಯಿತು.
ಈ ಸಭೆಯಲ್ಲಿ ಕೋವಿಡ್ 19 ಬಗ್ಗೆ ಕಟ್ಟು ನಿಟ್ಟಿನ ಕ್ರಮ ವಹಿಸುವ ಸಲುವಾಗಿ ಕೆಲ ನಿಯಮಗಳನ್ನು ನಿರ್ಣಯ ಮಾಡಲಾಯಿತು.
ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗಡಿ ವರ್ತಕರು ಹಾಗೂ ರಿಕ್ಷಾ ಚಾಲಕರುಗಳಿಗೆ ಸಂಪೂರ್ಣ ವ್ಯಾಕ್ಸಿನ್ ಪಡೆಯುವ ಹಾಗೇ ಕ್ರಮ ವಹಿಸುವುದು. 45 ವರ್ಷ ಮೇಲ್ಪಟ್ಟ ಮೇಲ್ಪಟ್ಟವರಲ್ಲಿ ವ್ಯಾಕ್ಸಿನ್ ಪಡೆದುಕೊಳ್ಳಲು ಇನ್ನೂ ಬಾಕಿ ಇರುವವರನ್ನು ಭೇಟಿ ಮಾಡಿ ಕಡ್ಡಾಯವಾಗಿ ವ್ಯಾಕ್ಸಿನ್ ಪಡೆದುಕೊಳ್ಳುವಂತೆ ಕ್ರಮ ವಹಿಸುವುದು.ಪ್ರತಿ ವಾರ್ಡ್ ಸದಸ್ಯರುಗಳು ಪ್ರತಿ ಮನೆಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸುವುದು.ಮಾಸ್ಕ್ ಧರಿಸದೆ ತಿರುಗಾಡುವವರಿಗೆ,100 ರೂ. ದಂಡ ವಿಧಿಸುವುದು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಏರುತ್ತಿದ್ದರೆ ಎಲ್ಲಾ ಕಾರ್ಯಕ್ರಮ ರದ್ದು ಪಡಿಸುವುದು. ಗುಂಪು ಕೂಡಿ ಆಟವಾಡುವುದನ್ನು ಸಂಪೂರ್ಣವಾಗಿ ನಿಷೇದಿಸಿದೆ ಹಾಗೂ ಆಟವಾಡುವುದು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದು. ಮಳೆಗಾಲವಾಗಿರುವುದರಿಂದ ಡೆಂಗ್ಯೂ ಪ್ರಕರಣ ಹೆಚ್ಚುತ್ತಿರುವ ಕಾರಣ ಈ ಬಗ್ಗೆ ಪ್ರತಿ ಮನೆ ಪರಿಸರದಲ್ಲಿ ನೀರು ನಿಲ್ಲದಂತೆ ಹಾಗೂ ಸ್ವಚ್ಛತೆಯನ್ನು ಕಾಪಾಡುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ.10 ಗಂಟೆಯ ನಂತರ ಅಂಗಡಿ ಮುಂಗಟ್ಟು ತೆರೆದಿದ್ದಲ್ಲಿ ಸದ್ರಿ ಅಂಗಡಿ ಮಾಲಕರಿಗೆ ದಂಡ ವಿಧಿಸಲಾಗುವುದು ಎಂದು ಸಭೆಯಲ್ಲಿ ನಿರ್ಣಾಯವಾಯಿತು.
ಪುಣಚ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿಂದ ಆಶಾಕಾರ್ಯಕರ್ತೆಯರು ಹಾಗೂ ಕಿರಿಯ ಮಹಿಳಾ ಆರೋಗ್ಯ ಕಾರ್ಯಕರ್ತೆಯರಿಗೆ ಸ್ಯಾನಿಟೈಸರ್, ಹ್ಯಾಂಡ್ ಗ್ಲೋಸ್ ಹಾಗೂ ಫೇಸ್ ಶೀಲ್ಡ್, ಗ್ಲೂಕೋ ಮೀಟರ್ ಅನ್ನು ವಿತರಣೆ ಮಾಡಲಾಯಿತು.
ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯಶಸ್ವಿನಿ ಶಾಸ್ತ್ರಿ, ಉಪಾಧ್ಯಕ್ಷರಾದ ರಾಘವ ಸಾರಡ್ಕ, ಗ್ರಾಮ ಪಂಚಾಯತ್ ಸದಸ್ಯರುಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾಕಾರ್ಯಕರ್ತೆಯರು, ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.