ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಎನ್ ಐ ಎ ತನಿಖೆ ಆಗಬೇಕು ಹಾಗೂ ಈ ಕುರಿತು ರಾಜ್ಯಪಾಲರಲ್ಲಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವಂತೆ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ,ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ ಶ್ರೀ ಸುನೀಲ್ ಕುಮಾರ್ ಕಾರ್ಕಳ, ಶಾಸಕ ಮಿತ್ರರು, ಪಕ್ಷದ ಮುಖಂಡರು ಹಾಗೂ ಮೃತ ಸುಹಾಸ್ ಅವರ ತಂದೆ, ತಾಯಿ ಹಾಗೂ ಮಾವ ಉಪಸ್ಥಿತರಿದ್ದರು.