ಭಾರತ ಹಾಗೂ ಪಾಕಿಸ್ತಾನ ಎರಡೂ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಿಳಿಸಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಇದನ್ನು ಘೋಷಣೆ ಮಾಡಲು ನನಗೆ ತುಂಬಾ ಸಂತಸವಾಗುತ್ತಿದೆ. ಈ ಒಂದು ನಿರ್ಧಾರದಿಂದ ಎರಡು ದೇಶಗಳಿಗೂ ಅಭಿನಂದನೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಡಿಜಿಎಂಒ ಮೊದಲು ಭಾರತವನ್ನು ಸಂಪರ್ಕಿಸಿ ಕದನ ವಿರಾಮಕ್ಕೆ ಮನವಿ ಮಾಡಿದ್ದರು. ಇದರ ನಂತರ ಎರಡು ದೇಶಗಳು ಯುದ್ಧ ವಿರಾಮಕ್ಕೆ ಘೋಷಣೆ ಮಾಡಿವೆ. ಇದು ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಘೋಷಣೆ ಮಾಡಲಾಗಿದೆ. ಉಳಿದ ಮಾಹಿತಿಯನ್ನು ಮೇ 12 ರಂದು ಹೇಳುತ್ತೇವೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಮಿಕ್ರಮ್ ಮಿಸ್ರಿ ಹೇಳಿದ್ದಾರೆ.
ಈ ಕದನ ವಿರಾಮವನ್ನು ಮುಂದುವರೆಸಿಕೊಂಡು ಹೋಗುವ ಕುರಿತು ಮುಂದಿನ ದಿನಗಳಲ್ಲಿ ಚರ್ಚೆ ಮಾಡಲಾಗುತ್ತದೆ. ಮೇ 12 ರಂದು ಮತ್ತೊಮ್ಮೆ ಡಿಜಿಎಂಒ ಅಧಿಕಾರಿಗಳು ಸಭೆ ನಡೆಸಿ ಮಹತ್ವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.