ಉಪ್ಪಿನಂಗಡಿ: ಪ್ರಸ್ತುತ ದಿನಗಳಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ನಿಯಂತ್ರಣದ ಮುಂಜಾಗ್ರತೆಯ ಕ್ರಮವಾಗಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಸಮಯದಲ್ಲಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಳ ಮನೆಗೆ ಆಕಸ್ಮಿಕ ಭೇಟಿ ಮಾಡಿ ಅವರುಗಳ ಪರಿಶೀಲನೆ ನಡೆಸುತ್ತಿದ್ದು ಚಲನವಲನ ಚಟುವಟಿಕೆಗಳ ಬಗ್ಗೆ ಪೊಲೀಸರು ನಿಗಾ ವಹಿಸುತ್ತಿದ್ದಾರೆ.
ಸೂಕ್ತ ಎಚ್ಚರಿಕೆಗಳನ್ನು ನೀಡಿ ಯಾವುದೇ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗದಂತೆ ಸೂಕ್ತ ತಿಳುವಳಿಕೆ ನೀಡಲಾಗುತ್ತಿದೆ.
ರಾತ್ರಿ ವೇಳೆ ತೆರಳುವ ವಾಹನಗಳ ಪರಿಶೀಲನೆ ನಡೆಸಲಾಗುತ್ತಿದೆ.