ಪುತ್ತೂರು:ಮೇ.17 ರಂದು ಪುತ್ತೂರು ಎಪಿಎಂಸಿ ರೈತ ಸಭಾಭವನದಲ್ಲಿ ನಡೆಯಲಿರುವ ಕಾಂಗ್ರೆಸ್ ವಲಯ ಹಾಗೂ ಬೂತ್ ಪದಾಧಿಕಾರಿಗಳ ತರಬೇತಿ ಹಾಗೂ ಕುಟುಂಬ ಸಮ್ಮಿಲನದ ಪೂರ್ವಭಾವಿ ಸಭೆಯು ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ರೈತಸಭಾಭವನದಲ್ಲಿ ನಡೆಯಿತು.
ಸಭೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ವಿಟ್ಲ ಬ್ಲಾಕ್ ಅಧ್ಯಕ್ಷ ಪದ್ಮನಾಭ ಪೂಜಾರಿ,ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಯು ಟಿ ತೌಸೀಫ್, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್,ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ, ಡಿಸಿಸಿ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ,ಸೇವಾದಳದ ಜೋಕಿಂ ಡಿಸೋಜಾ,ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಅಶ್ರಫ್ ,ಸಭೆಯಲ್ಲಿ ಕುಂಬ್ರ ದುರ್ಗಾಪ್ರಸಾದ್ ರೈ, ಶಶಿಕುಮಾರ್ ನೂಜಿ ಬೈಲು, ಮಹಿಳಾ ಬ್ಲಾಕ್ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು,ಡಿಸಿಸಿ ಕಾರ್ಯದರ್ಶಿ ಮುರಳೀದರ್ ರೈ ಮಠಂತಬೆಟ್ಟು,ಹಿರಿಯ ಕಾಂಗ್ರೆಸ್ ಮುಖಂಡ ಚಂದ್ರಹಾಸ ರೈ ಬೋಳೋಡಿ,ಯಾಕೂಬ್ ಮುಲಾರ್,ಉಲ್ಲಾಸ್ ಕೋಟ್ಯಾನ್, ಪುತ್ತೂರು ಬ್ಲಾಕ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರತಿಮಾ ಜಯರಾಮ ರೈ, ಸಂಪನ್ಮೂಲ ವ್ಯಕ್ತಿ ಪ್ರತಿಮಾ ಬನ್ನೂರು,ಎಸ್ ಸಿ ಘಟಕದ ಅಧ್ಯಕ್ಷ ಬಾಬು ಮರಿಕೆ,ಪುತ್ತೂರು ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ,ಗ್ಯಾರಂಟಿ ಸಮಿತಿ ಸದಸ್ಯ ಅಬ್ಬು ನವಗ್ರಾಮ,ಆರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ,ರೈ ಎಜುಕೇಶನಲ್ ಆಂಡ್ ಚಾರಿಟೇಬಲ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಬ್ಲಾಕ್ ಅಧ್ಯಕ್ಷ ಕೆ ಪಿ ಆಳ್ವ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿ ವಂದಿಸಿದರು.