ಮಡಿಕೇರಿ: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ 8 ಜನ ಯುವಕರ ಪೈಕಿ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಮಡಿಕೇರಿ ತಾಲೂಕಿನ ನಾಪೊಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿದೆ.
ಚೇರಂಬಾಣೆ ಮೂಲದ ಗಿರೀಶ್ (16) ಮತ್ತು ಅಯ್ಯಪ್ಪ (18) ಕಾವೇರಿ ನದಿಯಲ್ಲಿ ಈಜಲು ತೆರಳಿ ಜಲ ಸಮಾಧಿಯಾಗಿದ್ದಾರೆ.
ಇಬ್ಬರ ಪೈಕಿ ಓರ್ವನ ಮೃತದೇಹ ದೊರಕಿದೆ. ಇನ್ನೋರ್ವನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ನಾಪೊಕ್ಲು ಪಿಎಸ್ಐ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.