ವಿಟ್ಲ: ಸಾರ್ವಜನಿಕ ಶ್ರೀ ದುರ್ಗಾಪೂಜಾ ಸಮಿತಿ ವಿಟ್ಲ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ಇದರ ಸಾರಥ್ಯದಲ್ಲಿ ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಧರ್ಮಜಾಗೃತಿ ಹಾಗೂ ಲೋಕ ಕಲ್ಯಾಣಕ್ಕಾಗಿ ಅರ್ಧ ಏಕಾಹ ಭಜನೆ ಹಾಗೂ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ ಮೇ.16 ರಂದು ನಡೆಯಲಿದೆ.
ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಅರ್ಧ ಏಕಾಹ ಭಜನೆ, ಸಂಜೆ 4 ಗಂಟೆಗೆ ಶ್ರೀ ದುರ್ಗಾ ನಮಸ್ಕಾರ ಪೂಜೆ, ಸಂಜೆ 7 ಗಂಟೆಗೆ ಧಾರ್ಮಿಕ ಸಭೆ ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಮಿತಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



























