ಮೊನ್ನೆಯಷ್ಟೇ ಅದ್ಧೂರಿಯಾಗಿ ಪ್ರೀತಿಸಿದ ಹುಡುಗನ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಚೈತ್ರಾ ಕುಂದಾಪುರ ವಿರುದ್ಧ ತಂದೆ ಸಾಲು ಸಾಲು ಆರೋಪಗಳನ್ನು ಮಾಡಿದ್ದಾರೆ.
ಆಕೆ ನನ್ನನ್ನು ಮದುವೆಗೆ ಕರೆದಿಲ್ಲ. ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ ಅಂತ ಆಕ್ರೋಶ ಹೊರ ಹಾಕಿದ್ದರು. ಈ ಬೆನ್ನಲ್ಲೇ ಚೈತ್ರಾ ಕುಂದಾಪುರ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತಂದೆ ಬಗ್ಗೆಯೇ ಹೀಗೆ ಬರೆದುಕೊಂಡು ಶೇರ್ ಮಾಡಿಕೊಂಡಿದ್ದಾರೆ.

ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗ್ತಾರೆ.. ಅಂತ ಬರೆದುಕೊಂಡಿದ್ದಾರೆ.