ಪುತ್ತೂರು : ಲಾಕ್ ಡೌನ್ ನಡುವೆಯೂ ವಾಹನಗಳು ಸಂಜೆಯ ವೇಳೆ ಅನಗತ್ಯವಾಗಿ ಓಡಾಡುತ್ತಿದ್ದು, ಈ ನಿಟ್ಟಿನಲ್ಲಿ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸಿ ದಂಡ ವಿಧಿಸಿದ ಘಟನೆ ಪುತ್ತೂರಿನ ಅರುಣಾ ಚಿತ್ರಮಂದಿರದ ಬಳಿ ನಡೆದಿದೆ.
ಕೊರೊನಾ ನಿಯಂತ್ರಣಕ್ಕಾಗಿ ದ.ಕ ಜಿಲ್ಲಾಡಳಿತವೂ
ಕಟ್ಟು ನಿಟ್ಟಿನ ಕ್ರಮ ಜಾರಿಗೆ ತಂದಿದ್ದು, ಆದರೂ ವಾಹನಗಳು ಪೇಟೆಯಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದು, ಅಂತಹ ವಾಹನಗಳಿಗೆ ಟ್ರಾಫಿಕ್ ಪೊಲೀಸರು ದಂಡ ವಿಧಿಸಿ ಎಚ್ಚರಿಕೆ ನೀಡಿದರು.