ಪುತ್ತೂರು: ಶಾಮಿಯಾನದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ನಿಲ್ಲಿಸಿದ್ದ ಶಾಮಿಯಾನ ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳುವನ್ನು ಸುದೀಪ್ ಚೊಕ್ಕಾಡಿ ಎಂದು ಗುರುತಿಸಲಾಗಿದೆ.
ಸುದೀಪ್ ಅವರು ಮುರ ಸಮೀಪ ಆಯುರ್ವೇದಿಕ್ ಔಷಧಿಗಳ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಭಂದ ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.