ಪುತ್ತೂರು :ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಚರಂಡಿಗೆ ಬಿದ್ದ ಘಟನೆ ನಡೆದಿದೆ.
ಮಾಣಿ ಕಲ್ಲಡ್ಕ ರಸ್ತೆಯ ಸಮುದ್ರ ಹೋಟೆಲ್ ಬಳಿ ಈ ಘಟನೆ ನಡೆದಿದ್ದು ಬಸ್ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿತ್ತು ಎಂದು ತಿಳಿದುಬಂದಿದೆ.
ಬೆಳಗ್ಗಿನಿಂದಲೇ ಬಾರಿ ಮಳೆ ಸುರಿಯುತ್ತಿದ್ದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ್ದು, ಪರಿಣಾಮ ಬಸ್ ಚರಂಡಿಗೆ ಬಿದ್ದಿದೆ. . ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.