ಮಂಗಳೂರು: ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದು 11 ಗಂಟೆ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿದ್ದು ಬಳಿಕ ಅಲ್ಲಿಂದ ಕಾರ್ಯಕರ್ತರನ್ನು ಭೇಟಿ ಮಾಡಿ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಮಂಗಳೂರಿನಲ್ಲಿ ಮಳೆಯಿಂದಾಗಿ ಗುಡ್ಡ ಕುಸಿತ ಸಂಭವಿಯ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ಬಳಿಕ ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರೆಹಮಾನ್ ಮನೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.