ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ ಸಂಬಂಧ ಕೊನೆಗೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ಯುಡಿಆರ್ (Unnatural Death Report) ಬದಲು ಎಫ್ಐಆರ್ ದಾಖಲಾಗಿದೆ.
RCB ಫ್ರ್ಯಾಂಚೈಸಿ, KSCA ಹಾಗೂ ಡಿಎನ್ಎ ಮ್ಯಾನೇಜ್ಮೆಂಟ್ ವಿರುದ್ಧ FIR ದಾಖಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸರು BNS ಕಾಯ್ದೆ 195 ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ. ನಿನ್ನೆ ಪೊಲೀಸರು ಯುಡಿಆರ್ ದಾಖಲಿಸಿದ್ದರು. ಇಂದು ನೆಗ್ಲಿಜೆನ್ಸ್ ಅಡಿಯಲ್ಲಿ ಇಂದು ಎಫ್ಐಆರ್ ದಾಖಲಿಸಿದ್ದಾರೆ.
ಜೂನ್ 3 ರಂದು ಐಪಿಎಲ್ ಫೈನಲ್ ಮ್ಯಾಚ್ ನಡೆದಿತ್ತು. ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಆರ್ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿತ್ತು. ಬೆನ್ನಲ್ಲೇ, ಆರ್ಸಿಬಿ ಮ್ಯಾನೇಜ್ಮೆಂಟ್, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಕ್ಟರಿ ಮೆರವಣಿಗೆ ಆಯೋಜಿಸಿತ್ತು. . ಯಾವುದೇ ಪೂರ್ವ ತಯಾರಿ ಇಲ್ಲದೇ ಕಾರ್ಯಕ್ರಮ ಆಯೋಜನೆಗೊಂಡ ಪರಿಣಾಮ ನಿರೀಕ್ಷೆಗೂ ಮೀರಿ ಅಭಿಮಾನಿಗಳು ಬಂದಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಇದರಿಂದ 11 ಮಂದಿಯ ಜೀವ ಹೋಗಿದೆ.