ಪುತ್ತೂರು : ಖಾಸಗಿ ನರ್ಸಿಂಗ್ ಹೋಮ್ಗಳ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮಾಜಿ ಸಚಿವ , ಜೆಡಿಎಸ್ ನ ಹಿರಿಯ ನಾಯಕ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ಕಿರುಕುಳ ತಡೆ ಕಮಿಟಿಯ ಅಧ್ಯಕ್ಷ ಡಾ.ಗಣೇಶ್ ಪ್ರಸಾದ್ ಮುದ್ರಾಜೆ ರವರಿಂದ ದೂರು ದಾಖಲಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ರೇವಣ್ಣ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ” ಖಾಸಗಿ ನರ್ಸಿಂಗ್ ಹೋಂಗಳು ಕೋವಿಡ್ ಸಾಂಕ್ರಾಮಿಕ ರೋಗದ ಕಷ್ಟದ ಸಮಯದಲ್ಲಿಯೂ ದಂಧೆ ನಡೆಯುತ್ತಿದೆ. ಸುಲಿಗೆ ನಿಲ್ಲಿಸದಿದ್ದರೆ ಸಾರ್ವಜನಿಕರನ್ನು ಪ್ರಚೋದಿಸುತ್ತೇವೆ ಮತ್ತು ಜನರಿಗೆ ಹೇಳಿ ಹೊಡೆಸುತ್ತೇನೆ, ಈ ಆಸ್ಪತ್ರೆಗಳ ವಿರುದ್ಧ ಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿದೆ. ಇಲ್ಲದಿದ್ದರೆ, ನಾನು ಸುಮ್ಮನಿರುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯ ಆಧಾರದ ಮೇಲೆ ನರ್ಸಿಂಗ್ ಹೋಮ್ ಗಳ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಟೌನ್ ಪೊಲೀಸ್ ಠಾಣೆ ದೂರು ನೀಡಲಾಗಿದೆ.
ಖಾಸಗಿ ನರ್ಸಿಂಗ್ ಹೋಮ್ಗಳು ಸುಲಿಗೆ ನಡೆಸುವುದನ್ನು ನಿಲ್ಲಿಸದಿದ್ದರೆ ಜನರನ್ನು ಕಳಿಸಿ ಹೊಡೆಸುತ್ತೇವೆ ಎಂದು ಸಹ ಹೇಳಿದ್ದ ಅವರ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡಿತ್ತು. ಈ ಬೆನ್ನಲ್ಲೇ ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ಕಿರುಕುಳ ತಡೆ ಕಮಿಟಿಯ ಅಧ್ಯಕ್ಷ ಡಾ.ಗಣೇಶ್ ಪ್ರಸಾದ್ ಮುದ್ರಾಜೆ ಪುತ್ತೂರು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ಕಿರುಕುಳ ತಡೆ ಕಮಿಟಿಯ ಅಧ್ಯಕ್ಷರಾದ ಡಾ.ಗಣೇಶ್ ಪ್ರಸಾದ್ ಮುದ್ರಾಜೆ : ನಾನು ವೈಯಕ್ತಿಕ ನೆಲೆಯಲ್ಲಿ ದೂರು ದಾಖಲಿಸಿಲ್ಲ, ರೇವಣ್ಣ ಅವರ ಈ ಹೇಳಿಕೆ ವೈದ್ಯರಿಗೆ ಮಾನಸಿಕವಾಗಿ ಕಿರುಕುಳವನ್ನು ನೀಡುತ್ತದೆ. ಜೊತೆಗೆ ಜನರು ಈ ಹೇಳಿಕೆಯಿಂದ ಪ್ರಚೋದನೆಗೊಂಡು ವೈದ್ಯರ ಮೇಲೆ ದಾಳಿಗೆ ಮುಂದಾದರೆ ದೈಹಿಕವಾಗಿಯೂ ಹಲ್ಲೆಯಾಗುವ ಸಂಭವವಿದೆ. ಈ ದೃಷ್ಟಿ ಕೋನವನ್ನು ಗಮನದಲ್ಲಿರಿಸಿಕೊಂಡು ನಾನು ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದೇನೆ ಎಂದಿದ್ದಾರೆ.