ಮಂಗಳೂರು : ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ, ಹೆಸರಾಂತ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ (67) ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು.
ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು.
ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು- ಕನ್ನಡ ಪ್ರಸಂಗಗಳಲ್ಲಿ ಎಲ್ಲ ಸ್ವರೂಪದ ಪಾತ್ರಗಳನ್ನು ನಿರ್ವಹಿಸಿದ್ದ ಕಲಾವಿದರಾಗಿದ್ದರು.
ಹೃದಯ ಸಂಬಂಧಿ ಅನಾರೋಗ್ಯ ನಿಮಿತ್ತ ಕೆಲ ದಿನಗಳ ಹಿಂದಷ್ಟೇ ಅವರಿಗೆ ಚಿಕಿತ್ಸೆ ನಡೆದು ಚೇತರಿಸಿ ಮನೆಗೆ ಮರಳಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.